ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಕುರಿತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ನಿರಾಣಿ ಹೇಳಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದೆ. ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ.
ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ’ ಎಂದು ಹೇಳಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ