ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ

posted in: ರಾಜ್ಯ | 0

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಈ ಹಿಂದೆ ಇದ್ದಂತ್ತೆಯೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಕಾಗಿನೆಲೆಯ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನಿನ್ನೆ, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು, ಮಂಗಳವಾರ ಪಠ್ಯ ಪುಸ್ತಕದಲ್ಲಿ ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಈ ಹಿಂದೆ ಇದ್ದಂತೆಯೇ ಮುಂದುವರೆಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

advertisement

ಒಂಬತ್ತನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ ಜೀವನ ವಿವರಗಳನ್ನೊಳಗೊಂಡ ಪಠ್ಯಭಾಗವನ್ನು ಒಂದೇ ಸಾಲಿಗೆ ಕಡಿತಗೊಳಿಸುವ ಮೂಲಕ ಕನಕದಾಸರ ಜೀವನ ಚರಿತ್ರೆಯನ್ನು ಕಡೆಗಣಿಸಲಾಗಿದೆ ಎಂದು ಸ್ವಾಮೀಜಿಗಳು ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಹೇಳಿದ್ದರು.
ಕನಕದಾಸರ ಅದರ್ಶ ಮತ್ತು ದಾರ್ಶನಿಕ ಸತ್ಯಗಳನ್ನು ಮರೆಮಾಚುವ ದೊಡ್ಡ ಹುನ್ನಾರ ನಡೆದಿದ್ದು, ಇದು ಈ ನೆಲದ ನಾಡು- ನುಡಿಗೆ ಮಾಡಿದ ಚಾರಿತ್ರಿಕ ಮತ್ತು ಸಾಂಸ್ಕೃತಿಕ ದ್ರೋಹವಾಗಿದೆ. ತಾವು ಮಧ್ಯ ಪ್ರವೇಶಿಸಿ ಕನಕದಾಸರ ಜೀವನ ವಿವರಗಳನ್ನು ಹಿಂದಿನಂತೆಯೇ ಪಠ್ಯದಲ್ಲಿ ಮುಂದುವರೆಸಬೇಕು. ಎಂದು ಸ್ವಾಮೀಜಿಗಳು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕನಕದಾಸರ ಪಠ್ಯವನ್ನು ಮೊದಲಿನಂತೆಯೇ ಶಾಲಾ ಪಠ್ಯದಲ್ಲಿ ಮುಂದುವರೆಸುವಂತೆ ಸೂಚನೆ ನೀಡಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಶಿಕ್ಷಕರ ನೇಮಕಾತಿ ವಯೋಮಿತಿ ಹೆಚ್ಚಳ, ‘ಕಟಾಫ್‌ ಅಂಕ’ ಇಳಿಸಿದ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement