ಮೈಸೂರು : ಪತ್ನಿಯ ಶೀಲ ಶಂಕಿಸಿ ಪತಿ ಮಹಾಶಯ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಟ್ಟಮ್ಮ(40) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪರಾರಿಯಾಗಿರುವ ಆರೋಪಿ ಪತಿ ದೇವರಾಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ ದೇವರಾಜ್, ನಂತರ ಎರಡನೇ ಮದುವೆಯಾಗಿ ಈಗ ಎರಡನೇ ಹೆಂಡತಿಯನ್ನು ಕೊಲೆ ಮಾಡಿದ್ದಾನೆ.
ದಂಪತಿಗೆ ಕಾಲೇಜಿಗೆ ಹೋಗುವ 20 ವರ್ಷದ ಮಗಳಿದ್ದಾಳೆ. ಹೀಗಿದ್ದರೂ, ಆತ ತನ್ನ ಪತ್ನಿಯ ಶೀಲ ಶಂಕಿಸಿ ಜಗಳ ತೆಗೆಯುತ್ತಿದ್ದ. ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ದೇವರಾಜ್ ಕಿರುಕುಳ ಹೆಚ್ಚಾಗಿತ್ತು. ಅದು ತಾರಕಕ್ಕೇರಿ ಈಗ ಆಕೆಯ ರುಂಡವನ್ನೇ ಕತ್ತರಿಸಿದ್ದಾನೆ. ಮಗಳು ಕಾಲೇಜಿಗೆ ಹೋಗಿದ್ದ ವೇಳೆ ಆರೋಪಿ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ದೇವರಾಜ್ ವಿರುದ್ಧ ಮಗಳು ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ