ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ದರ್ಜಿಯನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬೀಳುವ ಮೊದಲು ಬೈಕ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ ಕಾರಣಕ್ಕೆ ಉದಯಪುರದಲ್ಲಿ ದರ್ಜಿ ಕನ್ನಯ್ಯ ಲಾಲ್ ಎಂಬವರನ್ನು ಬರ್ಬರವಾಗಿ ಹತ್ಯೆಗೈದು ಪೈಶಾಚಿಕ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಹಾಗೂ ಪ್ರಧಾನಿ ಮೋದಿಗೂ ಜೀವ ಬೆದರಿಕೆ ಹಾಕಿದ್ದರು.
ಕೊಲೆ ಮಾಡಿದ ಆರೋಪಿಗಳನ್ನು ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಈ ಭೀಕರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಿಕೊಳ್ಳುವಂತೆ ಗೃಹ ಸಚಿವಾಲಯ ನಿರ್ದೇಶನ ನೀಡಿದೆ.
ಹಂತಕರು ಪೂರ್ಣವಾಗಿ ಮುಖ ಮುಚ್ಚಿದ ಹೆಲ್ಮೆಟ್ ಹಾಕಿಕೊಂಡು ಬೈಕಿನಲ್ಲಿ ಪರಾರಿಯಾಗಿಲು ಯತ್ನಿಸುತ್ತಿದ್ದ ವೇಳೆ ಅವರಿಬ್ಬರನ್ನು ರಾಜ್‌ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಿಂದ ಬಂಧಿಸಲಾಗಿದೆ. ಈ ಬಂಧನ ಕಾರ್ಯಾಚರಣೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕೋ-ಆರ್ಡಿನೇಟರ್ ನಿತಿನ್ ಅಗರ್ವಾಲ್ ಎಂಬವರು ಟ್ವೀಟ್ ಮಾಡಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ