ಮೈಸೂರು: ನಟಿ ಪವಿತ್ರಾ ಲೋಕೇಶ ಅವರು ಮೈಸೂರಿನ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ಪವಿತ್ರಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವ ವ್ಯಕ್ತಿಯೊಬ್ಬರು ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ
‘ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು, ನನ್ನ ಘನತೆಗೆ ಧಕ್ಕೆ ತರುವ ಸಂದೇಶಕಳುಹಿಸುವ ಮೂಲಕ ಮಾನಸಿಕವಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ನಟಿ ಪವಿತ್ರಾ ಲೋಕೇಶ್, ನಜರಾಬಾದ್ನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಕನ್ನಡ ಮತ್ತು ತೆಲುಗು ಚಿತ್ರರಂಗ ಸೇರಿದಂತೆ ಧಾರಾವಾಹಿಗಳ ಮೂಲಕ ಅತ್ಯಂತ ಜನಪ್ರಿಯರಾಗಿರುವ ನಟಿ ಪವಿತ್ರಾ ಅವರು ಇತ್ತೀಚೆಗೆ ಅವರು ತಮ್ಮ ಎರಡನೆಯ ಪತಿಯಿಂದ ದೂರವಾಗಿ ಮೂರನೆಯ ವಿವಾಹವಾಗಿದ್ದಾರೆ ಎಂಬ ಗಾಳಿಸುದ್ದಿ ಹರಡಿತ್ತು. ಇದರ ನಡುವೆಯೇ ಅಪರಿಚಿತ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ರಚಿಸಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡಿ ಹೆಸರು ಕೆಡಿಸಲು ಯತ್ನಿಸುತ್ತಿದ್ದಾನೆ ಎಂದು ನಟಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ