ಬಹುಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ತಡೆಯಾಜ್ಞೆ ಕೋರಿ ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಗ್ಗಂಟಾಗಿರುವ ಮಹಾರಾಷ್ಟ್ರ ರಾಜಕಾರಣ ಮಹಾ ಕಗ್ಗಂಟಾಗಿದ್ದು, ರಾಜ್ಯಪಾಲ ಕೋಶಿಯಾರಿ ಅವರು, ಜೂನ್‌ ೩೦ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಆದೇಶಿದ್ದರು. ಇದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಸುಪ್ರೀಂಕೋರ್ಟ್‌ ಇದಕ್ಕೆ ತಡೆ ನೀಡಲು ನಿರಾಕರಿಸಿದ ನಂತರ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
ಸುಪ್ರೀಂ ಸೂಚನೆ ಹೊರಬಿದ್ದ ಕೆಲವೇ ನಿಮಿಷಗಳಲ್ಲಿ ಫೇಸ್​ಬುಕ್ ಲೈವ್ ಬಂದ ಠಾಕ್ರೆ, ತಾವು ರಾಜೀನಾಮೆ ನೀಡಲಿರುವುದಾಗಿ ಘೋಷಿಸಿದ್ದಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

advertisement

ದುರದೃಷ್ಟ ನಮ್ಮ ಸರ್ಕಾರವನ್ನು ಬೆನ್ನತ್ತಿದೆ” ಎಂದು ಉದ್ಧವ್ ಠಾಕ್ರೆ ಉನ್ನತ ಹುದ್ದೆಗೆ ರಾಜೀನಾಮೆ ಘೋಷಿಸಿದರು.
ಉದ್ಧವ್ ಠಾಕ್ರೆ ಅವರು ಶಿಂಧೆ ಬಣದ ಬಗ್ಗೆ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ, ತಾವು ಬಂಡಾಯ ಶಾಸಕರಿಗೆ ಅವರು ಬಯಸಿದ್ದನ್ನೆಲ್ಲ ನೀಡಿರುವುದಾಗಿ ಹೇಳಿದರು.

ಓದಿರಿ :-   ನ್ಯೂಯಾರ್ಕ್ ನಗರದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ: ಎರಡು ವಾರಗಳಲ್ಲಿ ಇದು ಎರಡನೇ ದಾಳಿ

ಗುರುವಾರ ಮಹಾರಾಷ್ಟ್ರ ಬಹುಮತ ಪರೀಕ್ಷೆ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಗುರುವಾರ ಸದನದ ಮಹಡಿಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಮಹಾರಾಷ್ಟ್ರ ರಾಜ್ಯಪಾಲರ ನಿರ್ದೇಶನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement