ಕೊರೊನಾ ಏರಿಕೆ ಬೆನ್ನಲ್ಲೇ ಹೊಸ ಮಾರ್ಗಸೂಚಿ ಜಾರಿಗೆ

ಬೆಂಗಳೂರು: ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ನಿರೀಕ್ಷೆಗೂ ಕೊರೊನಾ ಸೋಂಕು ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಮೆಂಟ್‍ಗಳಲ್ಲಿ ಕೋವಿಡ್-19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್‍ಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.
ಅಪಾರ್ಟ್‍ಮೆಂಟ್‍ಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದೇ ವಸತಿ ಸಮುಚ್ಚಯದಲ್ಲಿ 3 ರಿಂದ 5 ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಅವುಗಳನ್ನು ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಬೇಕು. 15ಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ಕಂಡು ಬಂದರೆ ಇಡೀ ಅಪಾರ್ಟ್‍ಮೆಂಟ್‍ನಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ.

ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿಗತಿಗೆ ಅನುಗುಣವಾಗಿ ಹೋಂ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗೆ ದಾಖಲಿಸುವುದನ್ನು ನಿರ್ಧರಿಸುವುದು. ಆರ್‌ಟಿ ಪಿಸಿಆರ್ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡುವುದು. ಪಾಸಿಟಿವ್ ಪ್ರಕರಣಗಳ ಶೇ.25ರಷ್ಟನ್ನು ಜಿನೋಮ್ ಸೀಕ್ವೆನ್ಸಿಂಗ್‍ಗೆ ರವಾನಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಕಡ್ಡಾಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು, ಶಾಲಾ-ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್‌ ಡೋಸ್‌) ನೀಡಲು ಆದ್ಯತೆ, ಕೊರೊನಾ ಲಕ್ಷಣವಿರುವ ವಿದ್ಯಾರ್ಥಿಗಳನ್ನು ಶಾಲೆಗೆ ಹಾಜರಾಗದಂತೆ ಸೂಚಿಸುವುದು ಹಾಗೂ ರಾಟ್‌ ಪರೀಕ್ಷೆ ನಡೆಸಬೇಕು.
ಸೋಂಕು ಕಂಡುಬಂದಲ್ಲಿ, ಶಿಷ್ಟಾಚಾರದ ಅನ್ವಯ ಅವರನ್ನು ಪ್ರತ್ಯೇಕವಾಗಿರಿಸಬೇಕು. ಒಂದು ವೇಳೆ ರಾಪಿಡ್‌ ಆ್ಯಂಟಿಜೆನ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೂ ಅಂಥವರನ್ನು ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ಶಾಲೆಯಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದರೆ ಶಾಲಾ ಕೊಠಡಿಯ ಭಾಗವನ್ನು ಸೋಡಿಯಂ ಹೈಪೋಕ್ಲೋರೈಟ್ ದ್ರಾವಣದಿಂದ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ. ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಮಾಡುವುದು, ಜ್ವರ, ನೆಗಡಿ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಂಡುಬಂದರೆ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement