ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ: ಹೆದ್ದಾರಿ ಅಧಿಕಾರಿ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಚಿತ್ರದುರ್ಗ ಯೋಜನಾ ಅನುಷ್ಠಾನ ಘಟಕದ ಯೋಜನಾ ನಿರ್ದೇಶಕ ಶ್ರೀನಿವಾಸುಲು ನಾಯ್ಡು ವಿರುದ್ಧ ಸಿಬಿಐ ಅಧಿಕಾರಿಗಳು, ತನಿಖೆ ಆರಂಭಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನಕ್ಕೆ ಸಂಬಂಧಿಸಿ ದೇವನಹಳ್ಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್‌ 22ರಂದು ನಾಯ್ಡು ಭಾಗವಹಿಸಿದ್ದರು. ಗುತ್ತಿಗೆದಾರರಿಂದ ಲಂಚದ ಹಣ ಸಂಗ್ರಹಿಸಿ ಆಂಧ್ರಪ್ರದೇಶಕ್ಕೆ ಸಾಗಿಸುತ್ತಿದ್ದ ಮಾಹಿತಿ … Continued

ಉದಯಪುರ ಹತ್ಯೆ: ಹಿಂದೂ ವ್ಯಕ್ತಿಯ ಶಿರಚ್ಛೇದ ಮಾಡಿದ ಆರೋಪಿಗಳಿಗೆ ಪಾಕ್ ಉಗ್ರ ಸಂಘಟನೆ ನಂಟು

ಉದಯಪುರ: ಮಂಗಳವಾರ ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿದ ಇಬ್ಬರು ವ್ಯಕ್ತಿಗಳು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಹೇಳಲಾಗಿದೆ. ಉದಯಪುರ ಹತ್ಯೆಯ ದೃಶ್ಯ ಕ್ಯಾಮರಾದಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಕಾಮೆಂಟ್‌ಗಳನ್ನು ಬೆಂಬಲಿಸುವ ಸಾಮಾಜಿಕ … Continued

ಖ್ಯಾತ ನಟಿ ಮೀನಾ ಪತಿ ವಿದ್ಯಾಸಾಗರ್ 48 ನೇ ವಯಸ್ಸಿನಲ್ಲಿ ವಿಧಿವಶ

ಚೆನ್ನೈ: ಖ್ಯಾತ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ 48 ನೇ ವಯಸ್ಸಿನಲ್ಲಿ ಜೂನ್ 28 ರಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವರದಿಗಳ ಪ್ರಕಾರ, ಅವರು ಕೋವಿಡ್ -19 ತೊಡಕುಗಳಿಂದ ಸಾವಿಗೀಡಾಗಿದ್ದಾರೆ. ವಿದ್ಯಾಸಾಗರ್ ಅವರು ಮಾರ್ಚ್‌ನಲ್ಲಿ ಕೋವಿಡ್ -19 ಸೋಂಕಿಗೆ ಒಳಗಾಗಿದ್ದರು ಮತ್ತು ಅದರ ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಅಲ್ಲದೆ, ವಿದ್ಯಾಸಾಗರ್ … Continued

ಮಹಾರಾಷ್ಟ್ರ ಬಿಕ್ಕಟ್ಟು: ನಾಳೆ ಉದ್ಧವ್ ಠಾಕ್ರೆ ಸರ್ಕಾರದ ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ, ಅಧಿವೇಶನದ ವೀಡಿಯೊ ಚಿತ್ರೀಕರಣ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಗುರುವಾರ (ಜೂನ್ 30) ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಿಕ್ಕಟ್ಟು ಪೀಡಿತ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿಶ್ವಾಸ ಮತ ಎಂಬ ಏಕೈಕ ಅಜೆಂಡಾದೊಂದಿಗೆ ಕೊಶ್ಯಾರಿ ಅವರು ನಾಳೆ (ಜೂನ್ 30)ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ … Continued

ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು 19 ಸಾವು

ಮುಂಬೈ: ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಈವರೆಗೆ 19 ಜನರು ಮೃತಪಟ್ಟಿದ್ದಾರೆ. ಇತರ ಆರು ಮಂದಿ ಗಾಯಗೊಂಡಿದ್ದಾರೆ. ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹಲವರನ್ನು ಅವಶೇಷಗಳಿಂದ ರಕ್ಷಿಸಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದೆ. ಘಾಟ್‌ಕೋಪರ್‌ನ ರಾಜವಾಡಿ ಆಸ್ಪತ್ರೆಗೆ ಕರೆತಂದವರಲ್ಲಿ 28 ಮತ್ತು 30 ವರ್ಷದ ಇಬ್ಬರು … Continued