ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 6 ರಂದು: ಚುನಾವಣಾ ಆಯೋಗ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯನ್ನು ಆಗಸ್ಟ್ 6 ರಂದು ನಿಗದಿಪಡಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗವು ಜೂನ್ 29 ರಂದು ಬುಧವಾರ ಪ್ರಕಟಿಸಿದೆ.
ಅಗತ್ಯ ಬಿದ್ದರೆ ಆಗಸ್ಟ್ 6ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಅದು ಹೇಳಿದೆ.
ಚುನಾವಣಾ ಆಯೋಗವು ಜುಲೈ 5 ರಂದು ಚುನಾವಣೆಯನ್ನು ಕರೆಯುವ ಅಧಿಸೂಚನೆಯನ್ನು ಹೊರಡಿಸಲಿದೆ. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ.

ಜುಲೈ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅರ್ಜಿ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಇದೇ ವೇಳೆ ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.
ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement