ಭಾರಿ ಮಳೆ ಹಿನ್ನೆಲೆ : ನಾಳೆಯೂ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ಶುಕ್ರವಾರ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಮಾಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರದ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಆದರೆ ನಾಳೆಯೂ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರ, ಶಾಲೆ-ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.
ವಿಪರೀತ ಮಳೆ ಮತ್ತು ಜಿಲ್ಲೆಯ ವಿವಿಧೆಡೆ ಕೃತಕ ನೆರೆ ಉಂಟಾದ ಹಿನ್ನೆಲೆಯಲ್ಲಿ ಗುರುವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು. ಗುರುವಾರದ ಮಳೆಗೆ ಮಂಗಳೂರು ನಗರದ ಹಲವೆಡೆ ರಸ್ತೆ ಗಳಲ್ಲಿ ನೀರು ನಿಂತು ಜನ ಜೀವನ ಅಸ್ತವ್ಯಸ್ತವಾಗಿತ್ತು. ಜಿಲ್ಲೆಯಲ್ಲಿ ಹಲವೆಡೆ ಭೂ ಕುಸಿತವಾಗಿರುವ ಬಗ್ಗೆ ವರದಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement