ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಆಗಿ, ದೇವೇಂದ್ರ ಫಡ್ನವಿಸ್ ಡೆಪ್ಯುಟಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಿದ್ದಾರೆ. ದಿಢೀರ್‌ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್​ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಇಂದು, ಗುರುವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಏಕನಾಥ್​ ಶಿಂಧೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸುವ ಮುನ್ನ ಮಾತನಾಡಿದ ಶಿಂಧೆ, ರಾಜ್ಯದ ಜನರ ಆಕಾಂಕ್ಷೆಗೆ ತಕ್ಕಂತೆ ಸರ್ಕಾರ ನಡೆಸುತ್ತೇವೆ ಎಂದು ಹೇಳಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಅವರಿಗೂ ಧನ್ಯವಾದ ತಿಳಿಸಿದರು. ಪ್ರಮಾಣ ವಚನ ಸಮಾರಂಭದಕ್ಕೆ ನೂತನ ಮುಖ್ಯಮಂತ್ರಿ ಶಿಂಧೆ ಕುಟುಂಬಸ್ಥರೊಂದಿಗೆ ಆಗಮಿಸಿದ್ದರು.
ಮಹಾರಾಷ್ಟ್ರದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ.

ಮಹಾರಾಷ್ಟ್ರ ನೂತನ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್ ಯಾವುದೇ ಸ್ಥಾನ ಪಡೆಯುವುದಿಲ್ಲ ಎಂದು ಹೇಳಿದ ಕೇವಲ ಮೂರು ಗಂಟೆಗಳ ನಂತರ, ಅವರ ಪಕ್ಷವು ಬೇರೆ ರೀತಿಯಲ್ಲಿ ಹೇಳಿದ್ದರಿಂದ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
“ಅವರು ಉಪಮುಖ್ಯಮಂತ್ರಿಯಾಗಬೇಕು” ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ದಿನದ ಎರಡನೇ ಅಚ್ಚರಿ ತಂದಿದ್ದಾರೆ. “ನಾನು ಅವರನ್ನು ವೈಯಕ್ತಿಕವಾಗಿ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದು ಫಡ್ನವೀಸ್ ಅವರು ಘೋಷಿಸಿದ ಮೊದಲ ಅಚ್ಚರಿಯ ನಿರ್ಧಾರವಾಗಿತ್ತು.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ಆಟೋ ಚಾಲಕನಿಂದ ಸಿಎಂ ವರೆಗೆ
ಏಕನಾಥ ಶಿಂಧೆ ಕೇವಲ 18 ನೇ ವಯಸ್ಸಿಗೆ ರಾಜಕೀಯಕ್ಕೆ ಧುಮುಕಿದವರು. 56 ವರ್ಷದ ಏಕನಾಥ್​ ಶಿಂಧೆ ಮೂಲತಃ ಇವರು ಆಟೋ ಚಾಲಕ. ಮಹಾರಾಷ್ಟ್ರದ ಸತಾರಾ ನಿವಾಸಿ. ರಾಜಕೀಯ ವಿದ್ಯಾರ್ಥಿಯಾಗಿರುವ ಇವರು, ಬಾಳಾಸಾಹೇಬ್​ ಠಾಕ್ರೆ ಅವರನ್ನು ಗುರುವಾಗಿ ಸ್ವೀಕರಿಸಿದ್ದರು. ರಾಜಕೀಯದಲ್ಲಿಯೇ ಮುಂದುವರೆಯಬೇಕು ಎನ್ನುವ ಕಾರಣಕ್ಕೆ ಸತಾರಾವನ್ನು ತೊರೆದು ಶಿವಸೇನೆಯ ಪ್ರಮುಖ ನೆಲೆಯಾದ ಥಾಣೆಗೆ ಬಂದಿದ್ದರು.
ಶಿವಸೇನೆ ಸೇರುವ ಮುನ್ನ ಶಿಂಧೆ ಬಹಳ ಕಾಲ ಕಾರು ಓಡಿಸುತ್ತಿದ್ದರು. ಪಕ್ಷದ ಕಾರ್ಯಕರ್ತರ ಸಂಘವನ್ನೂ ಆರಂಭಿಸಿದರು. 1980 ರ ದಶಕದಲ್ಲಿ ಥಾಣೆಯಲ್ಲಿ ಶಾಖಾ ಮುಖ್ಯಸ್ಥರಾಗಿದ್ದ ಶಿಂಧೆ 2004 ರಲ್ಲಿ ಶಾಸಕರಾಗುವ ಮೊದಲು ಥಾಣೆ ಮುನ್ಸಿಪಲ್ ಕಾರ್ಪೊರೇಟರ್ ಆಗಿದ್ದರು. ಶಿಂಧೆ ಅವರು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ ಮತ್ತು ಮೂರು ವರ್ಷಗಳಿಂದ ನಾಗರಿಕ ಸಂಸ್ಥೆ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ. ಅವರು ನಾಲ್ಕು ವರ್ಷಗಳ ಕಾಲ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸದನದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ.
2004 ರಿಂದ, ಅವರು ಸತತ ನಾಲ್ಕು ಚುನಾವಣೆಗಳನ್ನು ಗೆದ್ದಿದ್ದಾರೆ, ಅವರ ಮಗ ಶ್ರೀಕಾಂತ್ ಶಿಂಧೆ ಕಲ್ಯಾಣ್‌ನಿಂದ ಶಿವಸೇನೆಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement