ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ 4 ದಿನ ಭಾರೀ ಮಳೆ ಸಾಧ್ಯತೆ: ಆರೆಂಜ್- ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ನಾಳೆ ಜೂನ್‌ ೧ರಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 2 ರಿಂದ 4 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧರಣದಿಂದ ಜೋರಾಗಿ ಮಳೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೋಷಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement