ಮಂಗಳೂರು: ಕೆಲವೇ ದಿನಗಳ ಹಿಂದೆ ಮೂರು ಬಾರಿ ಭೂಮಿ ಕಂಪಿಸಿ ಆತಂಕ ಸೃಷ್ಟಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕೊಡಗು ಗಡಿ ಭಾಗದಲ್ಲಿ ನಿನ್ನೆ, ಗುರುವಾರ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪನವಾಗಿದೆ.
ಮಧ್ಯರಾತ್ರಿ 1.15ರ ಸುಮಾರಿಗೆ ಭೂ ಕಂಪನ ಉಂಟಾಗಿದೆ ಎಂದು ಹೇಳಲಾಗಿದ್ದು, ಭೂಮಿ ಕಂಪಿಸಿದ ಪರಿಣಾಮ ಗಾಢ ನಿದ್ರೆಯಲ್ಲಿದ್ದ ಜನ ಎಚ್ಚರಗೊಂಡು ಆತಂಕ್ಕೊಳಗಾದರು.
advertisement
ಆರಂಭದಲ್ಲಿ ದೊಡ್ಡ ಶಬ್ದ ಕೇಳಿತು. ನಂತರ ಭೂಮಿ ಅಲುಗಾಡಿದ ಅನುಭವವಾಯಿತು ಎಂದು ಅಲ್ಲಿನ ಜನ ಹೇಳಿದ್ದಾರೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ, ಬಡ್ಡಡ್ಕ, ಉಬರಡ್ಕ ಮೊದಲಾದೆಡೆ ಗ್ರಾಮಗಳು ಹಾಗೂ ಕೊಡಗಿನ ಗಡಿಭಾಗದಲ್ಲಿ ಈ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ.
ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿಯ ಕಂಪನವಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ