ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಮಂಜುನಾಥ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಂದಿನ ಆದೇಶದ ವರೆಗೆ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದರು.

ನಿನ್ನೆಯಷ್ಟೇ ಮಂಜುನಾಥ ಅವರನ್ನ ಎರಡನೇ ಬಾರಿ ಇಡೀ ದಿನ ಹತ್ತು ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಲಾಗಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಮಂಜುನಾಥ್‌ ಲಂಚ ಪಡೆದ ಆರೋಪ ಕೇಳಿ ಬಂದಿತ್ತು.ಈ ಸಂಬಂಧ ಎಸಿಬಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಮಂಜುನಾಥ ಮೂರನೇ ಆರೋಪಿಯಾಗಿದ್ದಾರೆ.
ಈ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಹಾಗೂ ಜಿ ಮಂಜುನಾಥ ಅವರನ್ನು ಇಂಟ್ರಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂನ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಬೆಂಗಳೂರು ನಗರ ಸಿಇಓ ಸಂಗಪ್ಪ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement