ಮಗು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಂಗಳೂರು: ಮರಣ ಪತ್ರ ಬರೆದಿಟ್ಟು ಪುಟ್ಟ ಮಗುವನ್ನು ಕೊಂದು ನಂತರ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್. ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
31 ವರ್ಷದ ದೀಪಾ ತನ್ನ ಮೂರುವರೆ ವರ್ಷದ ಮಗು ರಿಯಾ ಅವಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯುವ ಮುನ್ನ ಬರೆದ ಡೆತ್ ನೋಟ್‌ನಲ್ಲಿ”Nobody is responsible for it, I just felt life is full of shits. I’m sorry mom and Divya Love you Shona” ಎಂದು ಬರೆದಿಟ್ಟಿದ್ದಾರೆ.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಪತಿ ಆದರ್ಶ್ 2017ರಲ್ಲಿ ದೀಪಾ ಅವರನ್ನು ಮದುವೆಯಾಗಿದ್ದರು ಎಂದು ಹೇಳಲಾಗಿದೆ. ಆರ್.ಆರ್ ನಗರದ ಮಂತ್ರಿ ಅಪಾರ್ಟ್​ಮೆಂಟ್​ನಲ್ಲಿ ದಂಪತಿ ವಾಸವಿದ್ದರು‌. ಒಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತಿದ್ದ ದೀಪಾ ಚಿಕಿತ್ಸೆ ಪಡೆಯುತ್ತಿದ್ದರೂ ನೋವು ಕಡಿಮೆಯಾಗಿರಲಿಲ್ಲ.‌ ನಿನ್ನೆ ರಾತ್ರಿ ನಿದ್ರಿಸುತ್ತಿದ್ದ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ಸಾಯಿಸಿ ನಂತರ ಫ್ಯಾನಿಗೆ‌ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಆರ್.ಆರ್‌.ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement