ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಮುಂದುವರಿದಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಜುಲೈ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 5ರ ವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಾವೇರಿ ಜಲಾಯನ ಪ್ರದೇಶದ ಹಾರಂಗಿ ಜಲಾನಯನ ಪ್ರದೇಶದಲ್ಲಿ ಜೋರಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.
. ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾರಂಗಿ ಈ ವರ್ಷ ಬೇಗ ಭರ್ತಿಯಾಗಿದೆ. ಒಟ್ಟು ಜಲಾಶಯ ಒಟ್ಟು ಮಟ್ಟ 8.50 ಟಿಎಂಸಿ ಪೈಕಿ ಇದೀಗ 8.20 ಟಿಎಂಸಿಯಷ್ಟು ನೀರಿದೆ. ಮಳೆಯಾಗುತ್ತಿರುವುದರಿಂದ ಯಾವುದೇ ಸಮಯದಲ್ಲಿ ಡ್ಯಾಂನಿಂದ ನೀರು ಹೊರಬಿಡಬಹುದಾಗಿದೆ. ಬೆಂಗಳೂರಿನಲ್ಲೂ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement