ಕೊಡಗಿನ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ, ಈವರೆಗೆ 7 ಬಾರಿ ಭೂಕಂಪನ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ. ಏಳನೇ ಬಾರಿ ಕೊಡಗಿನ ಕೆಲಭಾಗದಲ್ಲಿ ಜನರಿಗೆ ಭೂಮಿ ಕಂಪನದ ಅನುಭವವಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇಂದು, ಶನಿವಾರ ಮಧ್ಯಾಹ್ನ 1:15ರ ಸುಮಾರಿಗೆ ಭಾರಿ ಶಬ್ದದೊಂದಿಗೆ 3-4 ಸೆಕೆಂಡ್‌ಗಳ ಕಾಲ ಜಿಲ್ಲೆಯ ಚೆಂಬು, ಪೆರಾಜೆ ಹಾಗೂ ಕರಿಕೆ ಸೇರಿದಂತೆ ಕೆಲವಡೆ ಭೂಮಿ ಕಂಪಿಸಿರುವ ಅನುಭವಾಗಿದೆ.

ಈ ಮಧ್ಯೆ ಕೊಡಗಿನ ಹಾರಂಗಿ ಜಲಾನಯನ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಮುನ್ನೆಚ್ಚರಿಕೆಯಾವಾಗಿ 1000ಕ್ಕೂ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಈ ಮಧ್ಯೆ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಕಂಪನ ಆಗಿದೆ. ಪದೇ ಪದೇ ಭೂ ಕಂಪನ ಆಗುತ್ತಿರುವ ಕಾರಣ ಜನರು ಆತಂಕಿತರಾಗಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಮಗನೇ ಸುಪಾರಿ ಕೊಟ್ಟಿದ್ದ...! 8 ಮಂದಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement