ಗುಂಡ್ಲುಪೇಟೆ: ಬಂಡೀಪುರ ಬಳಿ ಹುಲಿ ದಾಳಿಗೆ ಇಬ್ಬರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಗ್ರಾಮವಾದ ಲಕ್ಕಿಪುರದಲ್ಲಿ ಶನಿವಾರ ಹುಲಿಯೊಂದು ಇಬ್ಬರು ರೈತರ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗಳಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರನ್ನು ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರದ ಗವಿಯಪ್ಪ ಹಾಗೂ ರಾಜಶೇಖರ ಎಂದು ಗುರುತಿಸಲಾಗಿದೆ.
ಗವಿಯಪ್ಪ ಎಂದಿನಂತೆ ಜಮೀನಿನಲ್ಲಿ ಹಸು ಮೇಯಿಸಿಕೊಂಡು ಕೃಷಿ ಚಟುವಟಿಕೆ ನಡೆಸುತ್ತಿದ್ದಾಗ ಹುಲಿ ಹಸುವಿನ ಮೇಲೆ ದಾಳಿ ಮಾಡಿದೆ. ಆಗ ಹಸುವನ್ನು ರಕ್ಷಣೆಗೆ ಮುಂದಾದ ಗವಿಯಪ್ಪ ಅವರ ಮೇಲೂ ದಾಳಿ ನಡೆಸಿ ಗಾಯಗೊಳಿಸಿದೆ.

ಅವರು ಸಹಾಯಕ್ಕಾಗಿ ಜೋರಾಗಿ ಬೊಬ್ಬೆ ಹೊಡೆದಾಗ ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ಧಾವಿಸಿದ್ದಾರೆ. ಆಗ ಬೆದರಿದ ಹುಲಿ ಸಮೀಪದ ಬಾಳೆ ತೋಟಕ್ಕೆ ನುಗ್ಗಿದೆ.
ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು ದಾಳಿ ನಡೆದ ಜಾಗದಲ್ಲಿ ಹುಡುಕಾಟ ನಡೆಸಿದ ವೇಳೆ ಕೆಲವರು ಹುಲಿಗೆ ಕಲ್ಲು ಹೊಡೆದು ಗಾಬರಿಗೊಳಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಹುಲಿ ನೋಡಲು ಹೋಗಿದ್ದ ರಾಜಶೇಖರ ಎಂಬವರ ಮೇಲೆ ದಾಳಿ ಮಾಡಿದೆ. ಅಲ್ಲಿದ್ದವರು ಬೊಬ್ಬೆ ಹೊಡೆದು ನಂತರ ಓಡಿಹೋಗಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement