ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಾದ-ಪ್ರತಿವಾದ ಜೋರಾಗುತ್ತಿದ್ದು, ಜುಲೈ 12ರಂದು ಚಾಮರಾಜಪೇಟೆ ಬಂದ್‌ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್‌ಗೆ ಕರೆ ನೀಡಿದ್ದು, ಜುಲೈ 12ರಂದು ಅಂಗಡಿ ಮುಂಗಟ್ಟು ಮುಚ್ಚಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಚಾಮರಾಜಪೇಟೆಯಲ್ಲಿ ಅಂದು ಶಾಂತಿಯುತ ಮೆರವಣಿಗೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 15ರಂದು ಮೈದಾನದಲ್ಲಿ ಧ್ವಜಾರೋಹಣ ಮಾಡುವುದಾಗಿ ತಿಳಿಸಲಾಗಿದೆ. ಅಲ್ಲದೆ ಆಟದ ಮೈದಾನ ಬಿಬಿಎಂಪಿ ಸ್ವತ್ತು, ಸರ್ಕಾರದ ಆಸ್ತಿ ಎಂದು ಸಭೆಯಲ್ಲಿ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಪಾಲಿಕೆ ಸದಸ್ಯ ಬಿ.ವಿ ಗಣೇಶ, ಕ್ಷೇತ್ರದಲ್ಲಿ 20 ಶಾಲೆಗಳಿದ್ದರೂ ಆಟದ ಮೈದಾನವಿಲ್ಲ. ಹೀಗಾಗಿ ಆಟದ ಮೈದಾನವಾಗಿಯೇ ಉಳಿಯಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ನಾವು ಶಾಂತಿಯುತವಾಗಿ ಬಂದ್, ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ