ಉಪಚುನಾವಣೆಯಲ್ಲಿ ಭಾರೀ ಸೋಲಿನ ವಾರದ ನಂತರ ಪಕ್ಷದ ಎಲ್ಲ ಹುದ್ದೆಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

ಲಕ್ನೋ (ಉತ್ತರ ಪ್ರದೇಶ): ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಪಕ್ಷದ ಎಲ್ಲ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದಾರೆ. ಆದರೆ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.
ರಾಂಪುರ ಮತ್ತು ಅಜಂಗಢ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಪಕ್ಷ ಈ ಕ್ರಮಕ್ಕೆ ಯಾವುದೇ ಕಾರಣ ನೀಡಿಲ್ಲ.

ಸಮಾಜವಾದಿ ಪಕ್ಷದ (ಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು, ಪಕ್ಷದ ಉತ್ತರ ಪ್ರದೇಶ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ ಎಲ್ಲಾ ಪಕ್ಷದ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಯುವಜನ ಮತ್ತು ಮಹಿಳಾ ಘಟಕಗಳು ಸೇರಿದಂತೆ ಪಕ್ಷದ ಸಂಘಟನೆಗಳ ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳು ಮತ್ತು ಇತರ ಎಲ್ಲಾ ಕೋಶಗಳನ್ನು ವಿಸರ್ಜಿಸಲಾಗಿದೆ ಎಂದು ಪಕ್ಷವು ಹಿಂದಿಯಲ್ಲಿ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಿದೆ.

ಇತ್ತೀಚೆಗಷ್ಟೇ ನಡೆದ ಉತ್ತರ ಪ್ರದೇಶದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ರಾಂಪುರ ಮತ್ತು ಅಜಂಗಢ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ರಾಂಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ಸಿಂಗ್ ಲೋಧಿ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿ ಮೊಹಮ್ಮದ್ ಅಸೀಂ ರಾಜಾ ಅವರನ್ನು ಸೋಲಿಸಿದರೆ, ಅಜಂಗಢ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ನಿರಾಹುವಾ ಗೆಲುವು ಸಾಧಿಸಿದ್ದಾರೆ.
ಎರಡೂ ಸ್ಥಾನಗಳನ್ನು ಸಮಾಜವಾದಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗಿತ್ತು.
ಅಜಂಗಢ ಮತ್ತು ರಾಂಪುರ ಕ್ಷೇತ್ರಗಳಿಗೆ ಕ್ರಮವಾಗಿ ಅಖಿಲೇಶ್ ಯಾದವ್ ಮತ್ತು ಅಜಂ ಖಾನ್ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ಎದುರಾಗಿತ್ತು. ಈ ವರ್ಷದ ಆರಂಭದಲ್ಲಿ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ನಂತರ ಇಬ್ಬರೂ ನಾಯಕರು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement