ಮಣಿಪುರ : ನೋನಿ ಭೂಕುಸಿತದಲ್ಲಿ ಮತ್ತೆ ಮೂರು ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ 37ಕ್ಕೆ ಏರಿಕೆ

ಗುವಾಹತಿ: ಮಣಿಪುರದ ನೋನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ ಅವಶೇಷಗಳ ಅಡಿ ಸಿಲುಕಿದ್ದ ಮತ್ತೆ ಮೂವರ ಮೃತದೇಹಗಳನ್ನು ಭಾನುವಾರ ಹೊರ ತೆಗೆಯಲಾಗಿದ್ದು, ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೋನಿ ಜಿಲ್ಲೆಯ ತುಪುಲ್‌ನಲ್ಲಿ ರೈಲ್ವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಾಗ ಗುರುವಾರ ಬೆಳಗಿನ ಜಾವ ಸಂಭವಿಸಿದ್ದ ಈ ದುರಂತ ಸ್ಥಳದಲ್ಲಿ ಸುಮಾರು 81 ಜನ ಇದ್ದರು ಎನ್ನಲಾಗಿದೆ. 26 ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಇಂದು, ಭಾನುವಾರ ಟೆರಿಟೋರಿಯಲ್ ಆರ್ಮಿ ಜವಾನ ಸೇರಿದಂತೆ ಮೂವರ ಮೃತದೇಹಗಳು ಪತ್ತೆಯಾಗಿವೆ. ಪ್ರತಿಕೂಲ ಹವಾಮಾನ ರಕ್ಷಣಾ ರಕ್ಷಣಾ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದಕ್ಕೂ ಮುನ್ನ 13 ಸಿಬ್ಬಂದಿ ಸೇರಿದಂತೆ 18 ಮಂದಿಯನ್ನು ರಕ್ಷಿಸಲಾಗಿತ್ತು. ಶನಿವಾರ ರಾತ್ರಿ ಭಾರೀ ಮಳೆ ಮತ್ತು ಹೊಸ ಭೂಕುಸಿತದಿಂದಾಗಿ ಪ್ರತಿಕೂಲ ಹವಾಮಾನದ ಹೊರತಾಗಿಯೂ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸೇರಿದಂತೆ ಹಲವು ಸಂಸ್ಥೆಗಳು ನಾಪತ್ತೆಯಾದ 26 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿವೆ. ತುಪುಲ್‌ನ ಭೂಕುಸಿತ ಪ್ರದೇಶದಲ್ಲಿ ಪರಿಸ್ಥಿತಿ ಪ್ರತಿಕೂಲವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement