ರಾಸಲೀಲೆ ವೀಡಿಯೋ ವೈರಲ್ : ದೂರು ದಾಖಲಾದ ಬೆನ್ನಿಗೇ ಶಿಕ್ಷಕನ ಬಂಧನ

ಕೊಪ್ಪಳ: ಅಕ್ಕಪಕ್ಕದ ಮಹಿಳೆಯರೊಂದಿಗೆ ಸರಸವಾಡಿ, ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕ ಶಿಕ್ಷಕ ಅಜರುದ್ದೀನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಿಂಗಾಪುರ ಗ್ರಾಮದ ಶಿಕ್ಷಕ ಅಜರುದ್ದೀನ್ ಮಹಿಳೆಯರು ಮತ್ತು ಮಕ್ಕಳನ್ನು ಕಾಮದಾಟಕ್ಕೆ ಬಳಸಿಕೊಂಡಿದ್ದ ವೀಡಿಯೋ ವೈರಲ್ ನಂತರ ವೀಡಿಯೋದಲ್ಲಿದ್ದಳು ಎಂದು ಹೇಳಲಾದ ಮಹಿಳೆ ಅಜರುದ್ದೀನ್ ವಿರುದ್ಧ ದೂರು ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಆರೋಪಿ ಅಜರುದ್ದೀನ್‌ನನ್ನು ಗೋವಾದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತೇನೆ ಎಂದು ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಅಜರುದ್ದೀನ್ ಲೈಂಗಿಕವಾಗಿ ಬಳಸಿ ಕೊಂಡಿದ್ದಾನೆ. ನಂತರ ನೀನು ಸಹಕರಿಸದಿದ್ದರೆ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸಾಯಿಸುತ್ತೇನೆ ಎಂದು ಕೂಡ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಳು. ವೀಡಿಯೊ ವೈರಲ್‌ ಆಗುತ್ತಿದ್ದಂತೆಯೇ ಈ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು.
ಆರೋಪಿಯನ್ನು ಬಂಧಿಸಲು ಕೊಪ್ಪಳ ಎಸ್.ಪಿ. ಅರುಣಾಂಗ್ಷು ಗಿರಿ ಅವರು ವಿಶೇಷ ತನಿಖಾ ತಂಡ ರಚಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement