ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಪರಿಷತ್ ಸದಸ್ಯ ಹೆಚ್.ಆರ್ ಶ್ರೀನಾಥ್

ಬೆಂಗಳೂರು : ಜೆಡಿಎಸ್‌ನ ಮತ್ತೊಬ್ಬ ನಾಯಕ ಪಕ್ಷ ತೊರೆದಿದ್ದು, ಇಂದು, ಭಾನುವಾರ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್ ಆರ್ ಶ್ರೀನಾಥ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಕೊಪ್ಪಳದ ಶ್ರೀನಾಥ್ ಸೇರ್ಪಡೆಯಾಗಿದ್ದು, ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಕಾಂಗ್ರೆಸ್ ಶಾಲು, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದಂತ ಹೆಚ್ ಆರ್ ಶ್ರೀನಾಥ್, ನಾನು ಮೂರು ವರ್ಷ ವನವಾಸದಲ್ಲಿ ಇದ್ದೆ. ಇಂದು ಮತ್ತೆ ಪಕ್ಷಕ್ಕೆ ವಾಪಸ್ಸಾಗಿದ್ದೇನೆ. ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್ ಮಾರ್ಗದರ್ಶನದಲ್ಲಿ ಪಕ್ಷಕ್ಕೆ ವಾಪಸ್ ಬಂದಿದ್ದೇನೆ ಎಂದರು.
ನನಗೆ ಬಿಜೆಪಿಯವರು ಆಹ್ವಾನ ನೀಡಿದ್ದರು. ಜಾತ್ಯತೀತತೆ ಸಿದ್ಧಾಂತದ ಕಾರಣ ಮತ್ತೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದೇನೆ. ಯಾವುದೇ ಷರತ್ತು ಇಲ್ಲದೆ ಬಂದಿದ್ದೇನೆ ಎಂದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಳಗಾವಿ| ಕಬ್ಬು ದರ ನಿಗದಿ ; ಸಿಎಂ ಸಭೆಗೂ ಮುನ್ನ ಕೈಕೈ ಮಿಲಾಯಿಸಿದ ಇಬ್ಬರು ರೈತ ನಾಯಕರ ಬೆಂಬಲಿಗರು

ನಿಮ್ಮ ಕಾಮೆಂಟ್ ಬರೆಯಿರಿ

advertisement