ಆಮ್​ ಆದ್ಮಿ ಪಕ್ಷದ ಜನಸಂಪರ್ಕ-ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

posted in: ರಾಜ್ಯ | 0

ಬೆಂಗಳೂರು: ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಖ್ಯಾತ ನಟ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.
ಆಮ್‌ ಆದ್ಮಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಅವರ ಸೂಚನೆಯಂತೆ ಮುಖ್ಯಮಂತ್ರಿ ಚಂದ್ರು ಅವರನ್ನು ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ನೇಮಕ ಮಾಡಿದ್ದಾರೆ.

advertisement

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಚಂದ್ರು, ದೆಹಲಿ ಹಾಗೂ ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಯನ್ನು ಜಾರಿಗೆ ತಂದಿದ್ದು, ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ, ಇಲ್ಲಿಯೂ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.
ಮುಖ್ಯಮಂತ್ರಿ ಚಂದ್ರು ಅವರು ಕಳೆದ ಜೂನ್‌ನಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ವನಂ ಶಿವರಾಮು, ಡಾ.ಶಂಭು ಬಳಿಗಾರಗೆ ತಜ್ಞ ಪ್ರಶಸ್ತಿ, 30 ಸಾಧಕರಿಗೆ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ-ಪೂರ್ಣ ಪಟ್ಟಿ ಇಲ್ಲಿದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement