ಬಸ್‌ ಕಮರಿಗೆ ಬಿದ್ದು ಶಾಲಾ ವಿದ್ಯಾರ್ಥಿಗಳು ಸೇರಿ 16 ಮಂದಿ ಸಾವು

ಕುಲು: ಹಿಮಾಚಲ ಪ್ರದೇಶದ ಕುಲುವಿನ ಸೈನ್ಜ್ ಕಣಿವೆಯಲ್ಲಿ ಸೋಮವಾರ ಮುಂಜಾನೆ ಖಾಸಗಿ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲು ಡೆಪ್ಯೂಟಿ ಕಮಿಷನರ್ ಅಶುತೋಷ್ ಗಾರ್ಗ್ ಅವರು, ಸೈಂಜ್‌ಗೆ ತೆರಳುತ್ತಿದ್ದ ಬಸ್ ಜಂಗ್ಲಾ ಗ್ರಾಮದ ಬಳಿ ಕಮರಿಗೆ ಬಿದ್ದಿದೆ ಎಂದು ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು. ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಪಘಾತದ ಸ್ಥಳವು ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿಮೀ ದೂರದಲ್ಲಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಗಾಯಗೊಂಡ ಮೂವರನ್ನು ರಕ್ಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತವನ್ನು “ಹೃದಯ ವಿದ್ರಾವಕ” ಎಂದು ಕರೆದಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
“ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಪ್ರಧಾನಿ ಹೇಳಿದ್ದಾರೆ ಎಂದು ಸಚಿವರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement