ಭ್ರಷ್ಟಾಚಾರ ಆರೋಪ : ಐಎಎಸ್‌ ಅಧಿಕಾರಿ ಮಂಜುನಾಥ ಬಂಧಿಸಿದ ಎಸಿಬಿ

posted in: ರಾಜ್ಯ | 0

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಬೆಂಗಳೂರು ಜಿಲ್ಲಾಧಿಕಾರಿ ಹುದ್ದೆಯಿಂದ ಎತ್ತಂಗಡಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಇಂದು, ಸೋಮವಾರ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದ ಐಎಎಸ್​ ಅಧಿಕಾರಿ ಜೆ. ಮಂಜುನಾಥ ಬಂಧನವಾಗಿದೆ.
ಅವರನ್ನು ಸರ್ಕಾರ ಕೆಲವೇ ದಿನಗಳ ಹಿಂದೆ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ಎತ್ತಂಗಡಿ ಮಾಡಿತ್ತು. ಮಂಜುನಾಥ್‌ ವಿರುದ್ಧ ಭೂವ್ಯಾಜ್ಯ ಸಂಬಂಧ ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದಿರುವ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬೇಗೂರಿನ ನಿವಾಸಿಯೊಬ್ಬರು ಅನೇಕಲ್​ನ‌ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಹೊಂದಿದ್ದರು. ಜಿಲ್ಲಾಧಿಕಾರಿ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿತ್ತು. ಅರ್ಜಿದಾರರ ಅರ್ಜಿ ಕ್ಲಿಯರ್ ಮಾಡಬೇಕಾದರೆ ಆರೋಪಿ ಉಪತಹಶೀಲ್ದಾರ್ ಮಹೇಶ್ ಎಂಬುವವರು 5 ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಪ್ರಕರಣ ಇದಾಗಿದೆ.
ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು. ಹೀಗಾಗಿ ಎಸಿಬಿ‌ ತನಿಖಾಧಿಕಾರಿಗಳು ಜಿಲ್ಲಾಧಿಕಾರಿ ವಿಚಾರಣೆ‌ ನಡೆಸಿ ಹೇಳಿಕೆ ಪಡೆದುಕೊಂಡಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರದ ಬಗ್ಗೆ ಸಂಶಯ ವ್ಯಕ್ತಪಡಿಸಿದ ಹೈಕೋರ್ಟ್, ಭೂ ವ್ಯಾಜ್ಯ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಮಂಜುನಾಥ ಅವರನ್ನೂ ಆರೋಪಿಯನ್ನಾಗಿ ಸೇರಿಸುವಂತೆ ಆದೇಶಿಸಿತ್ತು. ಜಿಲ್ಲಾಧಿಕಾರಿಗಳ ಪಾತ್ರದ ಬಗ್ಗೆ ಸರಿಯಾಗಿ ತನಿಖೆ ನಡೆಸದ ಎಸಿಬಿಯನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಎಸಿಬಿ, ವಿಚಾರಣೆಗೆ ಹಾಜರಾಗುವಂತೆ ಮಂಜುನಾಥ ಅವರಿಗೆ ನೋಟಿಸ್ ನೀಡಿತ್ತು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಅಡಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತ ಔಷಧಿ ವಿತರಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement