ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆ ಆರ್ಭಟದ ಮುನ್ಸೂಚನೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಎರಡು ದಿನ ಸುರಿದ ಮಳೆ ಜನರ ನಿದ್ದೆಗೆಡಿಸಿದೆ. ಈಗ ಕರಾವಳಿ ಜಿಲ್ಲೆಗಳಲ್ಲಿ ಜುಲೈ 8ರ ವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ಮುನ್ಸೂನೆ ನೀಡಿದ್ದು, ಹೀಗಾಗಿ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಮತ್ತು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರಿಂದ ಮಳೆ ಕಳೆದೊಂದು ವಾರದಿಂದ ಆ ಭಾಗದಲ್ಲಿ ಸುರಿಯುತ್ತಲೇ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 8ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳ ಪೈಕಿ ಜುಲೈ 5 ಮತ್ತು 6ರಂದು ಮಳೆಯ ತೀವ್ರತೆ ಹೆಚ್ಚಾಗುವ ಕಾರಣಕ್ಕೆ ಅಂದು ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಸಿಲಾಗಿದೆ. ಉಳಿದ ದಿನ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದೈತ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement