ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ: ಸಿಐಡಿ ಅಧಿಕಾರಿಗಳಿಂದ ಎಡಿಜಿಪಿ ಅಮೃತ್ ಪೌಲ್ ಬಂಧನ

ಬೆಂಗಳೂರು: ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಇಂದು, ಸೋಮವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ(ADGP) ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ಒಂದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಅವರನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನ ವಿಚಾರಣೆ ಎದುರಿಸಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಮೂರನೇ ವಿಚಾರಣೆಗೆ ಗೈರು ಹಾಜರಾಗಿದ್ದು, ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪಾಲ್​ಅವರನ್ನು ಬಂಧಿಸಿದ್ದಾರೆ. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲೇ ಒಎಂಆರ್ ಶೀಟ್‌ ತಿದ್ದಲಾಗಿದೆ. ಯಾವೊಬ್ಬ ಅಧಿಕಾರಿಯನ್ನೂ ಬಿಡದಂತೆ ಸೂಚಿಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇವೆ. ಸಿಐಡಿ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಮಾಧ್ಯಮದವರಿಗೆ ತಿಳಿಸಿದರು.
ಎಡಿಜಿಪಿ ಅಮೃತ್ ಪಾಲ್‌ ಅವರನ್ನು ಸಿಐಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬಂಧಿತ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ ಮಾಡಲಾಗಿತ್ತು. ಅಮೃತ್‌ಪಾಲ್ ಅವರಿಂದ ಸಿಐಡಿ ಹಿರಿಯ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement