
ಬೆಂಗಳೂರು: ಕರ್ನಾಟಕ ಹಾಗೂ ಗೋವಾದ ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ಜುಲೈ 7ರಿಂದ 9ರ ವರೆಗೆ ಕರಾವಳಿ ಕರ್ನಾಟಕ; ಜುಲೈ 6ರಿಂದ 9ರ ವರೆಗೆ ಅವಧಿಯಲ್ಲಿ ದಕ್ಷಿಣ ಆಂತರಿಕ ಕರ್ನಾಟಕ,” IMD ಬುಲೆಟಿನ್ ಹೇಳಿದೆ.

ಜುಲೈ 6ರ ವರೆಗೆ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರ ಕೊಂಕಣ ಭಾಗ, ಗುಜರಾತ್, ಮಧ್ಯ ಮಹಾರಾಷ್ಟ್ರದಲ್ಲಿಯೂ ಐದು ದಿನಗಳ ಕಾಲ ಮಳೆಯಾಗಲಿದೆ. ಜುಲೈ 7 ಮತ್ತು 8ರಂದು ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಿರಲಿದೆ ಎಂದು ತಿಳಿಸಲಾಗಿದೆ.
ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡಕುಸಿತದಂತಹ ಘಟನೆಗಳು ಸಂಭವಿಸಬಹುದು. ಹೀಗಾಗಿ ಎಚ್ಚರಿಕೆ ವಹಿಸಬೇಕು. ತಗ್ಗು ಪ್ರದೇಶ, ನದಿ, ಸಮುದ್ರ ಬದಿಯಲ್ಲಿ ಇರುವವರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ