ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ: ದಿಲ್ಲಿ ಪೊಲೀಸರಿಂದ ತೇಜಸ್ವಿ ಸೂರ್ಯ ವಿಚಾರಣೆ

ನವದೆಹಲಿ: ಸಂಸದ ಮತ್ತು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ಸುಮಾರು ಎರಡು ಗಂಟೆ ವಿಚಾರಣೆಗೆ ಒಳಪಡಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆ ಮುಂದಿನ ಬ್ಯಾರಿಕೇಡ್‌ಗಳನ್ನು ಮುರಿದು, ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ಈ ವಿಚಾರಣೆ ನಡೆಸಲಾಗಿದೆ.
ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ನಡೆದ ಪ್ರತಿಭಟನೆಯಲ್ಲಿನ ಪಾತ್ರದ ಕುರಿತು ತೇಜಸ್ವಿ ಸೂರ್ಯ ಅವರನ್ನು 10 ದಿನಗಳ ಹಿಂದೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕುರಿತು ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 30ರಂದು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಕೇಜ್ರಿವಾಲ ಮನೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಬ್ಯಾರಿಗೇಡ್‌ಗಳನ್ನು ತಳ್ಳಿ ಉರುಳಿಸಿದ್ದರು. ಅಲ್ಲದೆ ಗೇಟುಗಳ ಮೇಲೆ ಬಣ್ಣಗಳನ್ನು ಎರಚಿದ್ದರು. ಸಿಸಿಟಿವಿ ಕ್ಯಾಮೆರಾವನ್ನು ಒಡೆದು ಹಾಕಿದ್ದರು.
ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪೊಲೀಸರು ಎರಡು ಬಾರಿ ನೋಟಿಸ್ ಜಾರಿಗೊಳಿಸಿದ್ದರು. ತಾವು ದೆಹಲಿಯಲ್ಲಿರುವಾಗ ಯಾವುದೇ ಸಮಯದಲ್ಲಿ ಬೇಕಾದರೂ ವಿಚಾರಣೆಗೆ ಸಿದ್ಧ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದರು.
ತೇಜಸ್ವಿ ಸೂರ್ಯ ಅವರನ್ನು ಅಶೋಕ ರಸ್ತೆಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಜೂನ್ ಕೊನೆಯ ವಾರದಂದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ತೇಜಸ್ವಿ ಸೂರ್ಯ ನೇತೃತ್ವದ ಬಿಜೆಪಿ ಯವ ಮೋರ್ಚಾದ ಎಂಟು ಸದಸ್ಯರನ್ನು ಆ ಸಮಯದಲ್ಲಿ ಬಂಧಿಸಲಾಗಿತ್ತು

ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement