
ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ನಗರದ ಸುಳ್ಳ ರಸ್ತೆಯಲ್ಲಿ ಇರುವ ಅವರ ಹೊಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಸುಳ್ಳ ರಸ್ತೆಯಲ್ಲಿನ ಚಂದ್ರಶೇಖರ ಗುರೂಜಿ ಅವರಿಗೆ ಸೇರಿದ ಹೊಲದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ ಎಂದು ಗುರೂಜಿ ಆಪ್ತರೂ ಆಗಿರುವ ವಿಧಾನಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ತಿಳಿಸಿದರು ಹಾಗೂ ಪಾರ್ಥೀವ ಶರೀರವನ್ನು ಬುಧವಾರ ಬೆಳಿಗ್ಗೆ 10 ಗಂಟೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಹೇಳಿದರು. ಈಗಾಗಲೇ ಕುಟುಂಬಸ್ಥರು ಸಹ ಆಸ್ಪತ್ರೆ ಬಳಿ ಆಗಮಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ