ಪೌರಕಾರ್ಮಿಕರ ನೇಮಕ ಮಾಡಲು ಸಮಿತಿ ರಚಿಸಲು ತೀರ್ಮಾನಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ ದಿನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ವಿಶೇಷ ನೇಮಕಾತಿ ನಿಯಮಗಳಿಗೆ ಮಾರ್ಗಸೂಚಿ ರೂಪಿಸಲು ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷರು, ಸದಸ್ಯರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಕಾನೂನು ಇಲಾಖೆ ಅಧಿಕಾರಿಗಳು ಸದಸ್ಯರಿರುತ್ತಾರೆ. ಅದನ್ನು ಕಾನೂನು ಮಾಡಲು ಸದನದ ಮುಂದೆ ಇಡಲಾಗುತ್ತದೆ. ಇದು ಬಹುಕಾಲದ ಬೇಡಿಕೆಯಾಗಿದ್ದು, ಪ್ರಸ್ತುತ ಪೌರಕಾರ್ಮಿಕರಿಗೆ ನೇರವಾಗಿ ವೇತನ ನೀಡಲಾಗುತ್ತಿದ್ದು, ಇತರೆ ಸೌಲಭ್ಯಗಳು ದೊರೆಯುತ್ತಿಲ್ಲ ಎಂದರು.
ಬೇರೆ ಯಾವುದೇ ರಾಜ್ಯಗಳು ಈ ರೀತಿಯ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಪ್ರತಿಭಟನೆ ನಡೆಸುತ್ತಿದ್ದ ಪೌರಕಾರ್ಮಿಕರು ಈಗ ಸಂತಸಗೊಂಡಿದ್ದಾರೆ. ಇದೊಂದು ಐತಿಹಾಸಿಕ ನಿರ್ಧಾರವಾಗಿದೆ. ರಾಜ್ಯಾದ್ಯಂತ ಎಲ್ಲ ಪೌರಕಾರ್ಮಿಕರಿಗೆ ಈಗಾಗಲೇ 2000 ರೂ.ಗಳ ಸಂಕಷ್ಟ ಭತ್ಯೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement