ಬೆಳ್ಳಂಬೆಳಿಗ್ಗೆ ಜಮೀರ್ ಅಹಮದ್‌ಗೆ ಎಸಿಬಿ ಶಾಕ್:‌ ಐದು ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ‌ ಇಡಿ ಬಳಿಕ ಈಗ ಎಸಿಬಿ ಶಾಕ್ ಕೊಟ್ಟಿದೆ. ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರದ ದಳ (ACB) ದ ಅಧಿಕಾರಿಗಳು ಜಮೀರ್ ಮನೆಗೆ ದಾಳಿ (Raid) ನಡೆಸಿದ್ದಾರೆ.
ಕಂಟೋನ್ಮೆಂಟ್​ನಲ್ಲಿರುವ ಜಮೀರ್ ಅಹಮದ್ ಖಾನ್ ಅವರ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್​ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಸೇರಿದಂತೆ ವಿವಿಧೆಡೆ 40 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಐಎಂಎ ಪ್ರಕರಣ ಸಂಬಂಧ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿತ್ತು. ಜಾರಿ ನಿರ್ದೇಶನಾಲಯ ನೀಡಿದ ವರದಿ ಅನ್ವಯ ಎಸಿಬಿ ಅಧಿಕಾರಿಗಳು, ದಂಡು ರೈಲ್ವೆ ನಿಲ್ದಾಣ ಸಮೀಪದ ಜಮೀರ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್, ಸದಾಶಿವನಗರ ಗೆಸ್ಟ್ ಗೌಸ್, ಬನಶಂಕರಿಯಲ್ಲಿರುವ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಶನಲ್ ಟ್ರಾವೆಲ್ಸ್ ಕಚೇರಿ‌ ಮೇಲೆ ದಾಳಿ ನಡೆಸಲಾಗಿದೆ. ಕಡತಗಳ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ ಶಾಸಕ ಜಮೀರ್ ಅಹ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಎದುರು ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement