ಭಾರೀ ಮಳೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ/ಉಡುಪಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖಾ ಮುನ್ಸೂಚನೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಕನ್ನಡದಾದ್ಯಂತ ಸೋಮವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೂ ದಟ್ಟವಾಗಿ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿದಿದೆ. ಹಲವು ನದಿಗಳು ಹಾಗೂ ಹಳ್ಳಗಳು ಭರ್ತಿಯಾಗಿ ಹರಿಯುತ್ತಿವೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಶಾಲೆಗಳಿಗೆ ರಜೆ
ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಕಾರಣ ಎಲ್ಲ ಶಾಲಾ ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಮಂಗಳವಾರ ರಜೆ ನೀಡಲಾಗಿದೆ.
ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಎಡೆಬಿಡದೆ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದು, ಮಂಗಳವಾರವೂ ಮಳೆ ಮುಂದುವರಿದಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ರಜೆ ಘೋಷಣೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement