ಹಿಂದೂ ದೇವತೆಗಳ ಚಿತ್ರಗಳಿರುವ ಪೇಪರ್‌ನಲ್ಲಿ ಸುತ್ತಿ ಕೋಳಿ ಮಾಂಸ ಮಾರುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂದೂ ದೇವತೆಗಳ ಚಿತ್ರಗಳಿರುವ ಪೇಪರ್‌ನಲ್ಲಿ ಕೋಳಿ ಮಾಂಸ ಸುತ್ತಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಮತ್ತು ಪೊಲೀಸ್ ತಂಡದ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ತಾಲಿಬ್ ಹುಸೇನ್ ತನ್ನ ಅಂಗಡಿಯಿಂದ ಕೋಳಿ ಮಾಂಸವನ್ನು ಹಿಂದೂ ದೇವರು ಮತ್ತು ದೇವತೆಯ ಚಿತ್ರವಿರುವ ಕಾಗದದ ಮೇಲೆ ಹಾಕಿ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದು ಕೆಲವರು ದೂರಿದ ನಂತರ ಈ ಘಟನೆ ಭಾನುವಾರ ನಡೆದಿದೆ ಎಂದುವರದಿಗಳು ತಿಳಿಸಿವೆ.
ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದಾಗ, ತಾಲಿಬ್ ಹುಸೇನ್ ಚಾಕುವಿನಿಂದ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಎಫ್‌ಐಆರ್ ಅಥವಾ ಪೊಲೀಸ್ ಪ್ರಕರಣದಲ್ಲಿ ದಾಖಲಿಸಲಾಗಿದೆ ಎಂದು ವರದಿಯಲ್ಲಿ ಸೇರಿಸಲಾಗಿದೆ. ತಾಲಿಬ್ ಹುಸೇನ್ ವಿರುದ್ಧ IPC ಸೆಕ್ಷನ್ 153-A,295-A ಮತ್ತು 307ರ ಅಡಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement