ಚಿಕ್ಕಮಗಳೂರು : ಕಾಲುಜಾರಿ ಹಳ್ಳಕ್ಕೆ ಬಿದ್ದು ಕೊಚ್ಚಿಹೋದ ಬಾಲಕಿ

ಚಿಕ್ಕಮಗಳೂರು: ಕಿರು ಸೇತುವೆ ದಾಟುವ ವೇಳೆ ಶಾಲಾ ವಿದ್ಯಾರ್ಥಿನಿಯೊಬ್ಬಳು ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ ದುರ್ಘಟನೆ ನಡೆದ ವರದಿಯಾಗಿದೆ.
ಚಿಕ್ಕಮಗಳೂರಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ (7) ಎಂಬ ಬಾಲಕಿ ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ ಎಂದು ಹೇಳಲಾಗಿದೆ. ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಸುಪ್ರೀತ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಹಳ್ಳವನ್ನು ದಾಟುವ ವೇಳೆ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ.ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಬಾಲಕಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜೋಗಿ, ಕಬ್ಬಿನಾಲೆ, ಶಿವಾನಂದ ಹೆಗಡೆಗೆ ಕೆರೆಮನೆ ʼಮಹಾಬಲ ಪ್ರಶಸ್ತಿʼ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement