ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ, ಮೂವರ ಸಾವು

posted in: ರಾಜ್ಯ | 0

ಮಂಗಳೂರು : ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದು ಶೆಡ್‌ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಸಾವಿಗೀಡಾದ ಘಟನೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ನಡೆದಿದೆ. ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಶೆಡ್ ನಲ್ಲಿ ಉಳಿದುಕೊಂಡು ರಬ್ಬರ್ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ ಐವರು ಕಾರ್ಮಿಕರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್‌ನೊಳಗೆ ಸಿಲುಕಿಕೊಂಡಿದ್ದರು. ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದ, ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಚಿಕಿಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಪಾಲಕ್ಕಾಡು ನಿವಾಸಿ ವಿಜು (45 ವ) ಸ್ಥಳದಲ್ಲೇ ಮೃತಪಟ್ಟಿದ್ದರೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಕೊಟ್ಟಾಂ ನಿವಾಸಿ ಬಾಬು (46) ಹಾಗೂ ಸಂತೋಷ್ ಅಲಪುರ (45 ) ಅವರು ಆಸ್ಪತ್ರೆಯಲ್ಲಿ ತಡರಾತ್ರಿ ಮೃತಪಟ್ಟಿದ್ದಾರೆ. ಕಣ್ಣೂರು ನಿವಾಸಿ ಜಾನ್ (44)ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್‌‌ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಾಗಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement