ಭಾರೀ ಮಳೆ ಮುನ್ಸೂಚನೆ :ನಾಳೆ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಣೆ

ಕಾರವಾರ: ನಾಳೆ, ಶುಕ್ರವಾರ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ  ಶಾಲಾ ಕಾಲೇಜುಗಳಿಗೆ ಜುಲೈ 8ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡು, ಹಳಿಯಾಳ, ಯಲ್ಲಾಪುರ ಭಾಗದಲ್ಲಿ ಎಂದಿನಂತೆ ಶಾಲಾ ಕಾಲೇಜುಗಳನ್ನು ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದಾರೆ. ಆದರೆ ಅಗತ್ಯಬಿದ್ದರೆ ಮೂರು ತಾಲೂಕುಗಳಿಗೆ ಶಾಲೆಗಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement