ಭಾರೀ ವರುಣಾರ್ಭಟ: ಈ ಎರಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ, ಶನಿವಾರ (ಜುಲೈ 8 ಮತ್ತು 9 ) ಈ ಎರಡು ಜಿಲ್ಲೆಗಳ ಎಲ್ಲ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅದೇರೀತಿ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಜುಲೈ 8 ಮತ್ತು 9 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಅಂಗನವಾಡಿ, ಶಾಲಾ, ಕಾಲೇಜು ಗಳಿಗೆ ರಜೆ ಘೋಷಿಸಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement