ಕೆಪಿಸಿಸಿಯಲ್ಲಿ ಪ್ರಿಯಾಂಕ್ ಖರ್ಗೆ, ನಾಗರಾಜ್ ಯಾದವ್‌ಗೆ ಮಹತ್ವದ ಹೊಣೆಗಾರಿಕೆ

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟು ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಚೇರ್ಮನ್‌ ಆಗಿ ಪ್ರಿಯಾಂಕ್ ಖರ್ಗೆ ಹಾಗೂ ಪಕ್ಷದ ಮುಖ್ಯ ವಕ್ತಾರರನ್ನಾಗಿ ನಾಗರಾಜ್ ಯಾದವ ಅವರಿಗೆ ಹೊಣೆಗಾರಿಕೆ ನೀಡಲಾಗಿದೆ.
ಈ ಸಂಬಂಧ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಕೆ.ಸಿ. ವೇಣುಗೋಪಾಲ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಉಳಿದಂತೆ ಕೆಪಿಸಿಸಿಯ ಸಂವಹನ ವಿಭಾಗಕ್ಕೆ ಉಪ ಚೇರ್ಮನ್‌ ಆಗಿ ಮನ್ಸೂರ್‌ ಅಲಿ ಖಾನ್‌, ಸಂವಹನದ ವೈಸ್ ಚೇರ್ಮನ್ ಆಗಿ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ, ಪರಿಷತ್‌ ಮಾಜಿ ಸದಸ್ಯ ರಮೇಶ್ ಬಾಬು ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್ ವಕ್ತಾರರು ಕಮ್‌ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಲಾವಣ್ಯ ಬಲ್ಲಾಳ, ಕವಿತಾ ರೆಡ್ಡಿ, ಐಶ್ವರ್ಯಾ ಮಹದೇವ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ವಾರ್ ರೂಂ ಮುಖ್ಯಸ್ಥರನ್ನಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ನೇಮಸಿಲಾಗಿದೆ. ಸುನೀಲ್ ಕಾನುಗೋಳು ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.
ಕೆಪಿಸಿಸಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಮತ್ತು ಪ್ರಧಾನ ಕಾರ್ಯದರ್ಶಿ ಮೆರೋಜ್ ಖಾನ್ ಅವರಿಗೆ ದಿನನಿತ್ಯದ ವಾರ್ ರೂಂ ಕಾರ್ಯಚಟುವಟಿಕೆಯ ಮೇಲ್ವಿಚಾರಣೆಯ ಹೊಣೆಗಾರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement