ತುಮಕೂರು: ಅತೀ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಢಿಕ್ಕಿ ಹೊಡೆದುಕೊಂಡು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಗುರುವಾರ ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ ಎಚ್ ರಸ್ತೆಯಲ್ಲಿ ನಡೆದಿದೆ.
ಗಾಯಗೊಂಡವರಿಗೆ ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿದರೆಗುಡಿಯಿಂದ ತಿಪಟೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತಿಪಟೂರಿನಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಕಾರಿಗೆ ಢಿಕ್ಕಿಯಾಗಿವೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಗೊಂಡವರನ್ನು ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ