
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೂತನ ಸಂಪುಟ 45 ಸಚಿವರನ್ನು ಒಳಗೊಂಡಿರುವ ಸಾಧ್ಯತೆಯಿದ್ದು, ಅದರಲ್ಲಿ ಬಿಜೆಪಿಯಿಂದ 25, ಏಕನಾಥ್ ಶಿಂಧೆ ಶಿವಸೇನೆಯಿಂದ 13 ಸಚಿವರು ಇರಲಿದ್ದಾರೆ ಹಾಗೂ ಉಳಿದ ಸಚಿವ ಸ್ಥಾನಗಳನ್ನು ಸ್ವತಂತ್ರ ಶಾಸಕರಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಮತ್ತು ಅವರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೊರತುಪಡಿಸಿ – ಹೆಚ್ಚಿನ ಮಂತ್ರಿಗಳು ಹೊಸಬರು ಇರಲಿದ್ದಾರೆ ಎಂದು ಹೇಳಲಾಗಿದೆ.
ಮುಂದಿನ ಮಹಾರಾಷ್ಟ್ರ ಚುನಾವಣೆಗೆ ತಯಾರಿ ನಡೆಸುವ ಮುನ್ನ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಬಯಸಿದೆ ಎಂದು ಮೂಲಗಳು ಹೇಳಿವೆ.

ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿದ ಶಿವಸೇನೆಯ ಬಂಡಾಯದ ನೇತೃತ್ವದ ನಂತರ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.
ಶಿಂಧೆ ಸೇನೆ ಮತ್ತು ಬಿಜೆಪಿ ನಡುವಿನ ಸೂತ್ರವನ್ನು ಅಂತಿಮಗೊಳಿಸಲಾಗುತ್ತಿದೆ. ಈ ಸೂತ್ರದ ಪ್ರಕಾರ ಶಿವಸೇನೆ ಪ್ರತಿ ಮೂರು ಶಾಸಕರಿಗೆ ಸಚಿವ ಸ್ಥಾನವನ್ನು ಪಡೆಯಲಿದೆ ಮತ್ತು ಬಿಜೆಪಿಯು ಪ್ರತಿ ನಾಲ್ಕು ಶಾಸಕರಿಗೆ ಒಂದು ಸ್ಥಾನವನ್ನು ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.


ನಿಮ್ಮ ಕಾಮೆಂಟ್ ಬರೆಯಿರಿ