ಟೋಕಿಯೋ: ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಲು ವೈದ್ಯರು ತೀವ್ರ ಪರಿಶ್ರಮ ಪಡುತ್ತಿದ್ದಾರೆ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಹೇಳಿದ್ದಾರೆ.
ಜಪಾನ್ ಕಾಲಮಾನ ಪ್ರಕಾರ ಬೆಳಗ್ಗೆ 11:30ರ ಸುಮಾರಿಗೆ ಪಶ್ಚಿಮ ಜಪಾನಿನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದಾಗ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ವ್ಯಕ್ತಿಯೊಬ್ಬ ಹಿಂದಿನಿಂದ ಗುಂಡು ಹಾರಿಸಿದ್ದ.
‘ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಈ ಕ್ಷಣದಲ್ಲಿ ಅವರು ಮಾಡಬಹುದಾದ ಎಲ್ಲವನ್ನೂ ಮಾಡುತ್ತಿದ್ದಾರೆ. ಅವರು ಇದರಿಂದ ಬದುಕುಳಿಯುತ್ತಾರೆ ಎಂದು ನಾನು ಭಾವಿಸುತ್ತೇನೆ, ಅದಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಕಿಶಿಡಾ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
67ರ ಹರೆಯದ ಅಬೆ ಬೆಳಗ್ಗೆ 11:30ರ ಸುಮಾರಿಗೆ ನಾರಾದ ಬೀದಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ ಅಪರಿಚಿತ ವ್ಯಕ್ತಿಯೊಬ್ಬ ಶಾಟ್ ಗನ್ನಿಂದ ದಾಳಿ ನಡೆಸಿದ್ದಾನೆ. ಶಿಂಜೋ ಅಬೆ ಅವರ ಎದೆಗೆ ಗುಂಡು ತಗುಲಿದೆ ಎಂದು ಜಪಾನ್ ಟೈಮ್ಸ್ ವರದಿ ಮಾಡಿದೆ.
ಗಾಯಗೊಂಡ ಶಿಂಜೋ ಅಬೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿಯಿತು. ಅದರೆ ಅವರ ಯಾವುದೇ ಅಂಗಾಂಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ