ರಾಜ್ಯದಲ್ಲಿ ಮಳೆಗೆ 12 ಜನರು ಸಾವು: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಈವರೆಗೆ ರಾಜ್ಯದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಈ ಮಾಹಿತಿ ನೀಡಿದ್ದಾರೆ. ರಾಜ್ಯದ ೧೩ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯಿದೆ. ಮಳೆಯಿಂದಾಗಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 65 ಜಾನುವಾರುಗಳು ಮೃತಪಟ್ಟಿವೆ. ಎಂದು ತಿಳಿಸಿದ ಅವರು, ಮುಂದಿನ ಮೂರು ದಿನಗಳು ರಾಜ್ಯದಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು ಜೊತೆಗೆ ಪರಿಸ್ಥಿತಿ ನಿಭಾಯಿಸಲು ಸಿದ್ಧವಾಗಿರಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಶುಕ್ರವಾರ ಅವರು ಹಲವಾರು ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement