ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ

ನವದೆಹಲಿ : ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡದ ನಟ ಜಗ್ಗೇಶ ಅವರು ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಟ ಜಗ್ಗೇಶ ಕನ್ನಡ ಭಾಷೆಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದೇವೇಳೆ ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿಯವರಾದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್, ಲೆಹರ್ ಸಿಂಗ್ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ ಅವರೂ ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜಗ್ಗೇಶ ಅವರು ಪ್ರಮಾಣ ವಚನಕ್ಕೂ ಮೊದಲು ದೆಹಲಿಯಲ್ಲಿ ಪತ್ನಿಯೊಂದಿಗೆ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಗುರು ರಾಯರ ಆಶೀರ್ವಾದ ಪಡೆದರು.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ನಿಮ್ಮ ಕಾಮೆಂಟ್ ಬರೆಯಿರಿ

advertisement