ಕಾರವಾರ : ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳಿಗೆ ನಾಳೆ, ಶನಿವಾರ (ಜುಲೈ 9) ಜಿಲ್ಲಾಡಳಿತ ರಜೆ ಘೋಷಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾಗೂ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಹಾಗೂ ರಾಜ್ಯ ಪ್ರಕೃತಿ ವಿಕೋಪ ಕೇಂದ್ರವು ಜುಲೈ 09ರ ಬೆಳಿಗ್ಗೆ 8-30 ರಿಂದ ಜುಲೈ 10ರ ಬೆಳಿಗ್ಗೆ 8-30ರ ವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲಿನ ತಾಲೂಕಿಗಳಾದ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳ ಎಲ್ಲ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಜುಲೈ 9ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ