ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಮುರ್ಮುಗೆ ಬೆಂಬಲ ಘೋಷಿಸಿದ ಶಿವಪಾಲ ಯಾದವ್‌

ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಉತ್ತರ ಪ್ರದೇಶದ ಬಿಜೆಪಿ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್‌ ಯಾದವ್‌ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸುವಂತೆ ಕೋರಿದ್ದಾರೆ. ಅವರನ್ನೇ ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಮುರ್ಮು ಅವರ ಗೌರವಾರ್ಥ ಯೋಗಿ ಆದಿತ್ಯನಾಥ್‌ ಅವರು ಶುಕ್ರವಾರ ಏರ್ಪಡಿಸಿದ್ದ ಔತಣ ಕೂಟದಲ್ಲಿ ಎಸ್‌ಪಿ ಮೈತ್ರಿ ಪಕ್ಷ ಸುಹೇಲ್‌ದೇವ್‌ ಭಾರತೀಯ ಸಮಾಜ್‌ ಪಾರ್ಟಿ ಮುಖ್ಯಸ್ಥ ಓಂ ಪ್ರಕಾಶ್‌ ರಾಜ್‌ಭಾರ್‌ ಮತ್ತು ಶಿವಪಾಲ್‌ ಯಾದವ್ ಅವರು ಪಾಲ್ಗೊಂಡಿದ್ದರು. ಇದರಿಂದಾಗಿ ಯಶವಂತ ಸಿನ್ಹಾ ಅವರನ್ನು ಬೆಂಬಲಿಸುತ್ತಿರುವ ವಿರೋಧಪಕ್ಷಗಳ ಪಾಳಯದಲ್ಲಿ ಬಿರುಕು ಮೂಡಿದಂತಾಗಿದೆ.
ಪ್ರಗತಿಶೀಲ ಸಮಾಜವಾದಿ ಪಕ್ಷ (ಲೋಹಿಯಾ) ಕಟ್ಟಿಕೊಂಡಿರುವ ಎಸ್‌ಪಿ ಶಾಸಕ ಶಿವಪಾಲ್‌ ಯಾದವ್‌ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್‌ ಜೊತೆ ಒಂದಾಗಿದ್ದರು. ಫಲಿತಾಂಶದ ಬಳಿಕ ಇಬ್ಬರ ನಡುವೆ ಮತ್ತೆ ಬಿರುಕು ಮೂಡಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement