ಹಾಸ್ಟೆಲ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ದಂಡ: ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶ

ಭೋಪಾಲ್: ಸೆಹೋರ್ ಮೂಲದ ಖಾಸಗಿ ಶಿಕ್ಷಣ ಸಂಸ್ಥೆಯೊಂದು ತಮ್ಮ ಹಾಸ್ಟೆಲ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದಕ್ಕಾಗಿ ಕೆಲವು ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಆರೋಪದ ಬಗ್ಗೆ ಮಧ್ಯಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ರಾಜ್ಯ ರಾಜಧಾನಿಯಿಂದ 70 ಕಿಮೀ ದೂರದಲ್ಲಿರುವ ಸೆಹೋರ್ ಜಿಲ್ಲೆಯ ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ವಿಐಟಿ) ಕ್ಯಾಂಪಸ್‌ನಲ್ಲಿ ಈ ಘಟನೆ ಸಂಭವಿಸಿದೆ.
ಹಾಸ್ಟೆಲ್‌ನಲ್ಲಿನ ಕಳಪೆ ಸೌಕರ್ಯಗಳ ಬಗ್ಗೆ ಆಡಳಿತದ ಗಮನ ಸೆಳೆಯಲು ಕೆಲವು ವಿದ್ಯಾರ್ಥಿಗಳು ಹನುಮಾನ್ ಚಾಲೀಸಾವನ್ನು ಪಠಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ‘ಹನುಮಾನ್ ಚಾಲೀಸಾ ಪಠಣಕ್ಕಾಗಿ ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಯಾವುದೇ ದಂಡ ವಿಧಿಸಲಾಗುವುದಿಲ್ಲ, ಸಂಪೂರ್ಣ ವಿಷಯದ ಬಗ್ಗೆ ವಿಸ್ತೃತ ತನಿಖೆ ನಡೆಸುವಂತೆ ಸೆಹೋರ್ ಜಿಲ್ಲಾಧಿಕಾರಿಗೆ ಆದೇಶಿಸಲಾಗಿದೆ. ಹಿಂದೂಸ್ತಾನದಲ್ಲಿ ಅಲ್ಲದಿದ್ದರೆ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾವನ್ನು ಎಲ್ಲಿ ಪಠಿಸುತ್ತಾರೆ ಎಂದು ಅವರು ಪ್ರಶ್ನಿಸಿದರು. ಹನುಮಾನ್ ಚಾಲೀಸಾ ಪಠಿಸುವ ವಿದ್ಯಾರ್ಥಿಗಳಿಗೆ ಯಾವುದೇ ದಂಡ ವಿಧಿಸಬಾರದು ಎಂದು ಸಂಸ್ಥೆಗೆ ಸಂದೇಶ ಕಳುಹಿಸಿದ್ದೇನೆ, ವಿದ್ಯಾರ್ಥಿಗಳಿಗೆ ಸಲಹೆ ನೀಡಬಹುದು, ಆದರೆ ಅಂತಹ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದರು.
ಸಂಸ್ಥೆಯಲ್ಲಿನ ಬಿಟೆಕ್ ಕೋರ್ಸ್‌ನ ಕೆಲವು ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿನ ಕಳಪೆ ಸೌಕರ್ಯಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹನುಮಾನ್ ಚಾಲೀಸಾವನ್ನು ಪಠಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ದೂರಿನ ಮೇರೆಗೆ ಏಳು ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗಿದೆ ಎಂದು ಅದು ಹೇಳಿದೆ.
ಕೆಲವು ವಿದ್ಯಾರ್ಥಿಗಳ ಪೋಷಕರು ಮತ್ತು ಭದ್ರತಾ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಂಸ್ಥೆ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಮಿಶ್ರಾ ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಕೂಡ ವಿದ್ಯಾರ್ಥಿಗಳಿಗೆ ದಂಡ ವಿಧಿಸುವುದನ್ನು ವಿರೋಧಿಸಿದ್ದಾರೆ.
‘ವಿದ್ಯಾರ್ಥಿಗಳಿಗೆ ವಿಧಿಸಿರುವ ದಂಡವನ್ನು ಹಿಂಪಡೆಯದಿದ್ದರೆ ಕಾಲೇಜಿನಲ್ಲಿ 7 ಸಾವಿರ ಮಂದಿ ಹನುಮಾನ್ ಚಾಲೀಸಾ ಪಠಿಸಲಿದ್ದಾರೆ’ ಎಂದು ಎಚ್ಚರಿಸಿದರು.

ಪ್ರಮುಖ ಸುದ್ದಿ :-   ಐಪಿಎಲ್‌ (IPL)2024: ಹಾರ್ದಿಕ್ ಪಾಂಡ್ಯ- ಲಸಿತ್ ಮಾಲಿಂಗ ನಡುವೆ ಮುನಿಸು..? ಈ ವೀಡಿಯೊಗಳನ್ನು ನೋಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement