ಜುಲೈ 12 ರವರೆಗೆ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್

ಶಿವಮೊಗ್ಗ : ಆಗುಂಬೆ ಘಾಟ್‌ ಹನ್ನೊಂದನೇ ತಿರುವಿನಲ್ಲಿ‌ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದೆ.
ಭಾರಿ ಮಳೆ ಸುರಿಯುತ್ತಿರುವ ಕಾರಣ ಮಣ್ಣು ತೆರವು ಕಾರ್ಯಾಚರಣೆ ವಿಳಂಬವಾಗಿದ್ದು, ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರವನ್ನು ಜುಲೈ 12ರ ವರೆಗೆ ನಿರ್ಬಂಧ ವಿಧಿಸಲಾಗಿದೆ.
ಜುಲೈ 12 ರಿಂದ 30ರ ವರೆಗೆ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು ಭಾರಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ‌ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಯಿಂದಾಗಿ ಈ ಭಾಗದಲ್ಲಿ ಗುಡ್ಡ‌ ಕುಸಿತ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ನಿಮ್ಮ ಕಾಮೆಂಟ್ ಬರೆಯಿರಿ

advertisement