ನೀರಿನ ಪ್ರಬಲ ಪ್ರವಾಹದಲ್ಲಿ ವ್ಯಕ್ತಿಯನ್ನು ರಕ್ಷಿಸಲು ಕೆಚ್ಚೆದೆಯ ಸಾಹಸ ಮಾಡಿದ ಇಬ್ಬರು ಪೊಲೀಸರು | ವೀಕ್ಷಿಸಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಪ್ರಬಲವಾದ ಪ್ರವಾಹದಲ್ಲಿಳಿದು ವ್ಯಕ್ತಿಯೊಬ್ಬನನ್ನು ರಕ್ಷಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಸಂಸದೆ ಸುಪ್ರಿಯಾ ಸುಳೆ ಅವರು ಶನಿವಾರ ಟ್ವಿಟರ್‌ನಲ್ಲಿ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.
ಪುಣೆಯ ದತ್ತವಾಡಿಯ ಇಬ್ಬರು ಪೊಲೀಸ್ ಸಿಬ್ಬಂದಿ ಸದ್ದಾಂ ಶೇಖ್ ಮತ್ತು ಅಜಿತ್ ಪೋಕರೆ, ಶಿವನೆ ಗ್ರಾಮದ ಬಾಗುಲ್ ಉದ್ಯಾನದ ಬಳಿ ಒಬ್ಬ ವ್ಯಕ್ತಿಯನ್ನು ರಕ್ಷಿಸಲು ಹೊಳೆಗೆ ಹಾರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ದತ್ತವಾಡಿ, ಪುಣೆ ಪೊಲೀಸ್ ಕಾನ್ಸ್‌ಟೇಬಲ್ ಸದ್ದಾಂ ಶೇಖ್ ಮತ್ತು ಅಜಿತ್ ಪೋಕರೆ ಅವರು ಶಿವಣೆಯ ಬಾಗುಲ್ ಉದ್ಯಾನದ ಬಳಿ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದರು. ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಇವರಿಬ್ಬರು ತೋರಿದ ಧೈರ್ಯ ಶ್ಲಾಘನೀಯ! ಮಹಾರಾಷ್ಟ್ರ ಪೊಲೀಸರ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಸುಪ್ರಿಯಾ ಸುಳೆ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಇಬ್ಬರು ಸಿಬ್ಬಂದಿ ಧೈರ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಮಂದಿ ಶ್ಲಾಘಿಸಿದ್ದಾರೆ. ಮಹಾರಾಷ್ಟ್ರದಲ್ಲಿ ತೀವ್ರ ಮಳೆ ಬೀಳುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ವರದಿಯಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ದುರ್ಬಲ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುವುದು ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಮುನ್ನೆಚ್ಚರಿಕೆ ವಹಿಸಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 17 ತಂಡಗಳನ್ನು ಮಹಾರಾಷ್ಟ್ರದ ಪ್ರದೇಶಗಳಲ್ಲಿ ನಿಯೋಜಿಸಿದ್ದು, ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement